ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಆದೇಶ ಪ್ರಶ್ನಿಸಿ ತಾವು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟಿನ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
“ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ, ನಮ್ಮ ಪಕ್ಷದ ಎಲ್ಲಾ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಮತ್ತು ಕಾಂಗ್ರೆಸ್ ನಾಯಕತ್ವ ನನ್ನ ಬೆಂಬಲಕ್ಕೆ ನಿಂತಿದೆ ಮತ್ತು ಹೋರಾಟವನ್ನು ಮುಂದುವರಿಸಲು ನನಗೆ ಪ್ರೋತ್ಸಾಹ ನೀಡಿದೆ. ನಾನು ಬಡವರ ಪರ ಎಂಬ ಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ನನ್ನ ವಿರುದ್ಧ ರಾಜಕೀಯ ಸೇಡಿನ ಕ್ರಮಕ್ಕೆ ಮುಂದಾಗಿವೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ಅರ್ಜಿಯಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯವು ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ನಾನು ಕಾನೂನು ಮತ್ತು ಸಂವಿಧಾನವನ್ನು ನಂಬುತ್ತೇನೆ… ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ. “. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರದ “ಸೇಡಿನ ರಾಜಕೀಯ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement