ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 7 ಜಿಲ್ಲೆಗಳಲ್ಲಿ ವಿಪರೀತ ಮಳೆಯ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್​ ಅಲರ್ಟ್​, 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್​ ಅಲರ್ಟ್​ ನೀಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ, ಕಲಬುರಗಿ, ಯಾದಗಿರಿಯಲ್ಲಿ ಕೂಡ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್​ ಅಲರ್ಟ್​ ನೀಡಲಾಗಿದೆ. ಅಲ್ಲದೆ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement