ಪ್ರಚೋದನಾಕಾರಿ ಹೇಳಿಕೆ ಆರೋಪ : ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ ಸಿಂಹ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಅವರ ಮೇಲಿದೆ. ಆಗ ಮಾತನಾಡಿದ್ದ ಅವರು, ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲಿಕ್ಕೆ ಬರಲ್ವಾ ಎಂದು ಹೇಳಿದ್ದರು. ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಹೇಳಿದ್ದರು. ಇದರ ನಂತರ ಪ್ರತಾಪ ಸಿಂಹ ಅವರು ದ್ವೇಷ ಭಾವನೆ ಪ್ರಚೋದಿಸುವ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಶಹಾಪುರ ಪಿಎಸ್ಐ ಅವರು ಪ್ರತಾಪ ಸಿಂಹ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬಿಎನ್‌ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಪ್ರತಾಪ ಸಿಂಹ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement