ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕು ದನ್ನೂರು ಟೋಲ್ ನಾಕಾ ಸನಿಹ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಲಾರಿ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಬೆಳಗಿನ ಜಾವ ಹೊಸಪೇಟೆ ಸನಿಹದ ಹುಲಿಗೆಮ್ಮ ದೇವಸ್ಥಾನದ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುವಾಗ ಕಾರು ಮತ್ತು ಕ್ಯಾಂಟರ್ ಮಧ್ಯೆ ಡಿಕ್ಕಿಯಾಗಿದೆ. ಕ್ಯಾಂಟರ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ್ದಾರೆ. ಮೃತರನ್ನು ಲಕ್ಷ್ಮಣ ವಡ್ಡರ (55), ಬೈಲಪ್ಪ ಬಿರಾದಾರ (45), ರಾಮಣ್ಣ ನಾಯಕ(50), ಕಾರು ಚಾಲಕ ರಫೀಕ್ ಮುಲ್ಲಾ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಠ
ನಿಮ್ಮ ಕಾಮೆಂಟ್ ಬರೆಯಿರಿ