ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಖಾತೆಯೂ ಇರುತ್ತದೆ.
ಉದಯನಿಧಿ ಅವರಲ್ಲದೆ, ವಿ ಸೆಂಥಿಲ್ ಬಾಲಾಜಿ, ಡಾ ಗೋವಿ ಚೆಜಿಯಾನ್, ಆರ್ ರಾಜೇಂದ್ರನ್ ಮತ್ತು ಎಸ್.ಎಂ. ನಾಸರ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲು ಎಂ.ಕೆ. ಸ್ಟಾಲಿನ್ ಶಿಫಾರಸು ಮಾಡಿದ್ದಾರೆ.
ಇದಲ್ಲದೆ, ಟಿ ಮನೋ ತಂಗರಾಜ್, ಗಿಂಗಿ ಕೆ.ಎಸ್. ಮಸ್ತಾನ್ ಮತ್ತು ಕೆ ರಾಮಚಂದ್ರನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಎಂಕೆ ಸ್ಟಾಲಿನ್ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಮಾಡಿರುವ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಚೆನ್ನೈನ ರಾಜಭವನದಲ್ಲಿ ಭಾನುವಾರ ಮಧ್ಯಾಹ್ನ 3:30ಕ್ಕೆ ನೂತನವಾಗಿ ಸೇರ್ಪಡೆಗೊಂಡ ಎಲ್ಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ