ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು

ಮಂಡ್ಯ:  ಜಿಲ್ಲೆಯ ನಾಗಮಂಗಲದಲ್ಲಿ (Mandya violence) ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣದಲ್ಲಿ ಬಂಧಿತರಾದ ಎಲ್ಲ 55 ಆರೋಪಿಗಳಿಗೆ ನ್ಯಾಯಾಲಯ ಜಾಮೀನು (Bail) ನೀಡಿದೆ.
ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಆರೋಪಿಗಳಿಗೆ ತಲಾ ಒಂದು ಲಕ್ಷ‌ ರೂಪಾಯಿ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕುವುದು, ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಹಾಗೂ ಯಾವುದೇ ಅಪರಾಧ ‌ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಕೋರ್ಟ್‌ ಷರತ್ತು ವಿಧಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಜಿ ಸಚಿವ ಬಿ ನಾಗೇಂದ್ರಗೆ ಷರತ್ತುಬದ್ಧ ಜಾಮೀನು

ನಿಮ್ಮ ಕಾಮೆಂಟ್ ಬರೆಯಿರಿ

advertisement