ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಶನಿವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ಇದನ್ನು ಗಮನಿಸಿದ ನಂತರ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ತಕ್ಷಣವೇ ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಸಮೇತ ಸ್ಥಳಕ್ಕೆ ಆಗಮಿಸಿದರು.
“ತಾಜ್ ವೆಸ್ಟ್ ಎಂಡ್ ಹೋಟೆಲ್ ಸಿಬ್ಬಂದಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಬಿಡಿಡಿಎಸ್ ಮತ್ತು ತಂಡವು ಆವರಣವನ್ನು ಪರಿಶೀಲಿಸಿದ್ದೇವೆ. ಯಾವುದೇ ಅನುಮಾನದ ವಸ್ತುಗಳು ಕಂಡುಬಂದಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ), ಎಚ್.ಟಿ.ಶೇಖರ್ ಹೇಳಿದ್ದಾರೆ. ದೂರು ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಈ ವರ್ಷದ ಮೇ ತಿಂಗಳಲ್ಲಿ ಪಂಚತಾರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ತಿಂಗಳುಗಳ ನಂತರ ಬಾಂಬ್ ಬೆದರಿಕೆಗಳು ಬಂದಿವೆ. ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಮಂದಿ ಗಾಯಗೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ