ಮನೆಯಲ್ಲಿ ತಂದೆ, 4 ಹೆಣ್ಣುಮಕ್ಕಳ ಶವ ಪತ್ತೆ

ನವದೆಹಲಿ : ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರಿಯರು ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತಂದೆಯೇ ಮೊದಲು ಮಕ್ಕಳನ್ನು ಕೊಂದು ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಶುಕ್ರವಾರ ಕಟ್ಟಡದ ಮಾಲೀಕರಿಂದ ಕರೆ ಮಾಡಿ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಲೀಕರು ಹಾಗೂ ನೆರೆಹೊರೆಯವರು ಮನೆಯ ಕದತಟ್ಟಿದರೂ ಬಾಡಿಗೆದಾರರಾದ ಇವರು ಮನೆಯ ಬಾಗಿಲು ತೆರೆಯಲಿಲ್ಲ ಎಂದು ಹೇಳಿದರು.
ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಮತ್ತು ರಂಗಪುರಿಯಲ್ಲಿರುವ ಅವರ ಮನೆಯಲ್ಲಿ ಮೂರು ಪ್ಯಾಕೆಟ್ ವಿಷ, ಐದು ಗ್ಲಾಸ್ ಮತ್ತು ಅನುಮಾನಾಸ್ಪದ ದ್ರವವನ್ನು ಹೊಂದಿರುವ ಚಮಚ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಣ್ಣು ಮಕ್ಕಳ ಸೊಂಟ ಮತ್ತು ಕುತ್ತಿಗೆಗೆ ಕೆಂಪು ದಾರವನ್ನು ಕಟ್ಟಲಾಗಿತ್ತು. ವ್ಯಕ್ತಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಹೀರಾಲಾಲ ಶರ್ಮಾ (46) ಮತ್ತು ಅವರ ಪುತ್ರಿಯರಾದ ನೀತು, 26, ನಿಕ್ಕಿ, 24, ನೀರು, 23, ಮತ್ತು ನಿಧಿ (20) ಎಂದು ಗುರುತಿಸಲಾಗಿದೆ. ಇಬ್ಬರು ಹೆಣ್ಣುಮಕ್ಕಳು ವಿಕಲಚೇತನರು ಎಂದು ಪೊಲೀಸರು ತಿಳಿಸಿದ್ದಾರೆ.
“ಬಾಗಿಲು ಒಳಗಿನಿಂದ ಚಿಲಕ ಹಾಕಲಾಗಿತ್ತು ಮತ್ತು ಅಗ್ನಿಶಾಮಕ ದಳದ ತಂಡದ ಸಹಾಯದಿಂದ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದರು. ಫ್ಲಾಟ್‌ನಲ್ಲಿ ಎರಡು ಕೊಠಡಿಗಳಿವೆ. ಮೊದಲ ಕೊಠಡಿಯಲ್ಲಿಯೇ ಒಬ್ಬ ಪುರುಷ ಶವವಾಗಿ ಬಿದ್ದಿರುವುದು ಕಂಡುಬಂದರೆ ಮತ್ತೊಂದು ಕೊಠಡಿಯಲ್ಲಿ ನಾಲ್ಕು ಹೆಣ್ಣುಗಳು ಶವವಾಗಿ ಪತ್ತೆಯಾಗಿವೆ. ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವ್ಯಕ್ತಿಯ ಪತ್ನಿ ಸುಮಾರು ಒಂದು ವರ್ಷದ ಹಿಂದೆ ಕ್ಯಾನ್ಸರ್‌ನಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಅಕ್ಕಪಕ್ಕದವರಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement