ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ ; ಫೋನ್‌ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾನುವಾರ (ಸೆಪ್ಟೆಂಬರ್ 29) ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುನ್ನ ಕಥುವಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಲೆತಿರುಗುವಿಕೆಯಿಂದಾಗಿ ಅಸ್ವಸ್ಥರಾದರು. ಅವರಿಗೆ ನಿಲ್ಲಲು ಹಾಗೂ ಮಾತನಾಡಲು ಕಷ್ಟವಾಯಿತು. ಆಗ ಅವರ ಭದ್ರತಾ ಸಿಬ್ಬಂದಿ ಮತ್ತು ಸಹ ಕಾಂಗ್ರೆಸ್ ನಾಯಕರು ಅವರ ನೆರವಿಗೆ ಬಂದರು. ನಂತರ ಅಲ್ಪವಿಶ್ರಾಂತಿ ಪಡೆದು ಒಂದು ಲೋಟ ನೀರು ಕುಡಿದ ನಂತರ ಮಾತು ಮುಂದುವರಿಸಿದರು.

ನಂತರ, ಖರ್ಗೆ ಅವರು “ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಹೋರಾಡುತ್ತೇವೆ. ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ” ಎಂದು ಅವರು ಹೇಳಿದರು.
ಅವರ ಪುತ್ರ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರು ತಮ್ಮ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ಅವರು, “ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರದ ಜಸ್ರೋಟಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಸ್ವಲ್ಪ ಅಸ್ವಸ್ಥರಾಗಿದ್ದರು. ಅವರ ವೈದ್ಯಕೀಯ ತಂಡವು ಅವರನ್ನು ಪರೀಕ್ಷಿಸಿದೆ ಮತ್ತು ಸ್ವಲ್ಪ ಕಡಿಮೆ ರಕ್ತದೊತ್ತಡವನ್ನು ಹೊರತುಪಡಿಸಿ, ಅವರ ಆರೋಗ್ಯ ಚೆನ್ನಾಗಿದೆ ಎಂದು ಹೇಳಿದ್ದಾರೆ.
“ಎಲ್ಲರ ಕಾಳಜಿಗೆ ಅತ್ಯಂತ ಕೃತಜ್ಞರಾಗಿರಬೇಕು. ಅವರ ಸಂಕಲ್ಪ, ಜನರ ಶುಭ ಹಾರೈಕೆಗಳ ಜೊತೆಗೆ ಅವರನ್ನು ಬಲವಾಗಿ ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ ; 6 ಕೆನಡಾ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement