ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ.
ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ ಹಾಗೂ ಪತ್ರ ಬರೆಯುವ ಮೂಲಕ 16 ಪುಟಗಳ ದೂರು ಸಲ್ಲಿಕೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಡಾದಿಂದ 14 ಸೈಟುಗಳನ್ನು ಅಕ್ರಮವಾಗಿ ಪಡೆಯಲಾಗಿದೆ ಎಂದು ತಮ್ಮ ದೂರಿನಲ್ಲಿ ತಿಳಿಸಿರುವ ಸ್ನೇಹಮಯಿ ಕೃಷ್ಣ ಅವರು ಈ ವಿಚಾರವಾಗಿ ಜಾರಿ ನಿರ್ದೇಶನಾಲಯವು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಲೋಕಾಯುಕ್ತ ಪೊಲೀಸರು ನಾಲ್ಕು ತಂಡ ರಚನೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡಗಳನ್ನು ರಚನೆ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ