ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ.
ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ. ಎಂ.ಪಾರ್ವತಿ, ಅವರ ಭಾಮೈದ ಮಲ್ಲಿ ಕಾರ್ಜುನಸ್ವಾಮಿ, ಭೂಮಿ ಮಾರಾಟ ಮಾಡಿದ ಜೆ. ದೇವರಾಜು ಆರೋಪಿ ಆಗಿದ್ದಾರೆ.
ಎಫ್ ಐಆ‌ರ್ ದಾಖಲಾದ ನಂತರ ಪ್ರಕರಣ ತನಿಖೆಗಾಗಿ ಲೋಕಾಯುಕ್ತ ಎಸ್ಪಿ ಉದೇಶ ಅವರು, ಇಬ್ಬರು ಡಿವೈಎಸ್ಪಿ ಮತ್ತು ಇಬ್ಬರು ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಡಿವೈಎಸ್‌ಪಿ ಮಾಲತೇಶ, ಚಾಮರಾಜನಗರ ಡಿವೈಎಸ್‌ಪಿ ಮ್ಯಾಥ್ಯ ಥಾಮಸ್ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ ಅವರನ್ನೊಳಗೊಂಡ 4 ತಂಡ ರಚಿಸಿದ್ದಾರೆ. ದಾಖಲೆಗಳ ಪರಿಶೀಲನೆ ಬಳಿಕ ಅಧಿಕಾರಿಗಳ ತಂಡ ತನಿಖೆ ಆರಂಭಿಸುವ ಸಾಧ್ಯತೆ ಇದೆ.
ಇ.ಡಿ.ಗೆ ದೂರು…
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ 16 ಪುಟಗಳ ಸುದೀರ್ಘ ದೂರಿನ ಪತ್ರವನ್ನು ಇಡಿ ಕಚೇರಿಗೆ ಇ ಮೇಲ್‌ ಮೂಲಕ ಕಳುಹಿಸಿದ್ದಾರೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement