ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ರಾತ್ರಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಈ ವೇಳೆ ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಬಂಧಿಸಿದ್ದಾರೆ. ಭಅನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಪಾಕ್ ಪ್ರಜೆಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಜಿಗಣಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ .ಪಾಕ್ ಪ್ರಜೆ ಪತ್ನಿ ಬಾಂಗ್ಲಾ ಮೂಲದವಳು. ಅಕ್ರಮವಾಗಿ ವಾಸವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಪಾಕ್ ಪ್ರಜೆ ಧರ್ಮದ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಕೊನೆಗೆ ಅಲ್ಲಿ ಇರೋಕೆ ಆಗದೆ ದೇಶ ತೊರೆದು ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿ ಢಾಕಾದಲ್ಲಿ ವಾಸವಾಗಿದ್ದ. ಈ ವೇಳೆ ಢಾಕಾದಲ್ಲಿ ಬಾಂಗ್ಲಾ ಯುವತಿ ಪರಿಚಯವಾಗಿದ್ದಾಳೆ. ಬಾಂಗ್ಲಾ ಯುವತಿಯೊಂದಿಗೆ ಮದುವೆ ಮಾಡಿಕೊಂಡು ಬಳಿಕ 2014ರಲ್ಲಿ ಪತ್ನಿ ಜೊತೆ ಬಾಂಗ್ಲಾದಿಂದ ಭಾರತದ ಗಡಿಯಲ್ಲಿ ನುಸುಳಿಕೊಂಡು ಭಾರತ ಪ್ರವೇಶಿಸಿ ದೆಹಲಿಗೆ ಬಂದಿದ್ದ ಎನ್ನಲಾಗಿದೆ.
ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿ ಸ್ಥಳೀಯರ ಪರಿಚಯ ಮಾಡಿಕೊಂಡು ವ್ಯಕ್ತಿಯೊಬ್ಬನ ನೆರವಿನಿಂದ ಸ್ಥಳೀಯ ನಿವಾಸಿಯೆಂದು ಗುರುತಿಸಲು ಆಧಾರ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ದಾಖಲೆಗಳನ್ನು ಸೃಷ್ಟಿಕೊಂಡಿದ್ದ. 2018ರಲ್ಲಿ ಪತ್ನಿ ಸಮೇತ ಬೆಂಗಳೂರಿಗೆ ಬಂದು ಬೆಂಗಳೂರಿನ ಜಿಗಣಿಯಲ್ಲಿ ನೆಲೆಸಿದ್ದಾನೆ. ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಸುಳಿವು ಸಿಕ್ಕಿದೆ. ಗುಪ್ತಚರ ಅಧಿಕಾರಿಗಳು ಆ ಬಗ್ಗೆ ಮಾಹಿತಿ ಕಲೆಹಾಕಿ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ರಾತ್ರಿ ಕಾರ್ಯಾಚರಣೆ ನಡೆಸಿ ಪೊಲೀಸರು ಇವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.
ನಿಮ್ಮ ಕಾಮೆಂಟ್ ಬರೆಯಿರಿ