ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: /ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ.
ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಿಶೋರಕುಮಾರ ಬೊಟ್ಯಾಡಿ ಅವರಿಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಟಿಕೆಟ್ ಘೋಷಣೆ ಮಾಡಿದೆ. ಮಾಜಿ ಸಂಸದ ನಳಿನಕುಮಾರ ಕಟೀಲು, ಮಾಜಿ ಸಚಿವ ಪ್ರಮೋದ ಮಧ್ವರಾಜ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷವು ಕಿಶೋರಕುಮಾರ ಅವರಿಗೆ ಅವಕಾಶ ಸಿಕ್ಕಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸತತ ಮೂರು ಸಲ ಈ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದರು. ಬಿಜೆಪಿ ಇಲ್ಲಿ ಪ್ರಾಬಲ್ಯ ಹೊಂದಿದ್ದು, ಪುತ್ತೂರು ಮೂಲದವರಾದ ಕಿಶೋರಕುಮಾರ ಅವರು ಬಿಜೆಪಿಯಲ್ಲಿ ಸುದೀರ್ಘ ಅವಧಿಯಿಂದ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. 2008ರಿಂದ 2013ರವರೆಗೆ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, 2014ರಿಂದ 2016ರವರೆಗೆ ಯುವ ಮೋರ್ಚಾದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನ ಪರಿಷತ್‌ ಸ್ಥಾನಕ್ಕೆ ಉಪಚುನಾವಣೆಗೆ ಅಕ್ಟೋಬರ್ 21 ರಂದು ಮತದಾನ ನಡೆಯಲಿದ್ದು, 24 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಅತ್ಯಾಚಾರ ಆರೋಪದ ಪ್ರಕರಣ ; ಶಾಸಕ ಮುನಿರತ್ನಗೆ ಜಾಮೀನು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement