ಇರಾನ್ “ಸನ್ನಿಹಿತವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಲು” ತಯಾರಿ ನಡೆಸುತ್ತಿದೆ ಎಂದು ಅಮೆರಿಕ ಅಧಿಕಾರಿಯೊಬ್ಬರು ಎಚ್ಚರಿಸಿದ ಕೆಲವೇ ಗಂಟೆಗಳ ನಂತರ ಇರಾನ್ ಮಂಗಳವಾರ ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.
ಕ್ಷಿಪಣಿಗಳನ್ನು ಇರಾನಿನ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್, ಕರಾಜ್ ಮತ್ತು ಅರಾಕ್‌ನಿಂದ ಹಾರಿಸಲಾಯಿತು. ಟೆಹ್ರಾನ್ ಟೈಮ್ಸ್ ವರದಿಯ ಪ್ರಕಾರ, ಇಸ್ರೇಲ್ ವಿರುದ್ಧದ ಪ್ರತೀಕಾರ ತೀರಿಸಿಕೊಳ್ಳುವ ನಿರ್ಧಾರವನ್ನು ಇರಾನ್‌ನ ಅತ್ಯುನ್ನತ ರಾಷ್ಟ್ರೀಯ ಭದ್ರತಾ ಮಂಡಳಿ (SNSC) ತೆಗೆದುಕೊಂಡಿದೆ.
ಜುಲೈ 31 ರಂದು ಟೆಹ್ರಾನ್‌ನಲ್ಲಿ ಫೆಲೆಸ್ತೀನ್ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಇಸ್ರೇಲ್ ಹತ್ಯೆ ಮಾಡಿತು. ಸೆಪ್ಟೆಂಬರ್ 27 ರಂದು ಬೈರುತ್, ಲೆಬನಾನ್‌ನಲ್ಲಿ ತನ್ನ ಬೃಹತ್ ವೈಮಾನಿಕ ದಾಳಿಯಲ್ಲಿ, ಇರಾನಿನ ಬ್ರಿಗೇಡಿಯರ್ ಜನರಲ್ ಅಬ್ಬಾಸ್ ನಿಲ್ಫೊರೌಶನ್ ಅವರನ್ನು ಇಸ್ರೇಲ್ ದಾಳಿಯಲ್ಲಿ ಕೊಲ್ಲಲ್ಪಟ್ಟರು. ಅವರು ಲೆಬನಾನ್‌ನಲ್ಲಿ ಹಸನ್ ನಸ್ರಲ್ಲಾ ನೇತೃತ್ವದ ಹಿಜ್ಬೊಲ್ಲಾಕ್ಕೆ ಇರಾನಿನ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ.
ಇಸ್ರೇಲ್ ರಕ್ಷಣಾ ಪಡೆಗಳು (IDF) ಸಹ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ದೃಢಪಡಿಸಿದೆ ಮತ್ತು ನಿವಾಸಿಗಳು ಬಾಂಬ್ ಶೆಲ್ಟರ್‌ಗಳ ಸಮೀಪದಲ್ಲಿಯೇ ಇರಲು ಆದೇಶಿಸಿದ್ದು, ದೇಶದಾದ್ಯಂತ ವಾಯುದಾಳಿ ಸೈರನ್‌ಗಳು ಮೊಳಗಿದವು.
“ಇರಾನ್‌ನಿಂದ ರಾಕೆಟ್‌ಗಳನ್ನು ಇಸ್ರೇಲ್‌ಗೆ ಹಾರಿಸುವುದರಿಂದಾಗಿ ಎಲ್ಲಾ ಇಸ್ರೇಲಿ ನಾಗರಿಕರು ಬಾಂಬ್ ಶೆಲ್ಟರ್‌ನಲ್ಲಿದ್ದಾರೆ” ಎಂದು ಐಡಿಎಫ್ (IDF) ಎಕ್ಸ್ ನಲ್ಲಿ ಹಂಚಿಕೊಂಡಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಂಗಳವಾರ ಇಸ್ರೇಲಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ, “ಇಸ್ರೇಲ್ ವಿರುದ್ಧ ಸನ್ನಿಹಿತ ಕ್ಷಿಪಣಿ ದಾಳಿ” ನಡೆಸುವ ಇರಾನ್ ಯೋಜನೆಗಳ ವಿರುದ್ಧ ರಕ್ಷಿಸಲು ಅಮೆರಿಕ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಬೈಡನ್ ಹಾಗೂ ಮುಂದಿನ ತಿಂಗಳು ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಯಾಗಿರುವ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಇಬ್ಬರೂ ಶ್ವೇತಭವನದಿಂದ ಇಸ್ರೇಲ್ ಮೇಲೆ ಇರಾನ್ ದಾಳಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಬಿಎನ್‌ಒ (BNO) ನ್ಯೂಸ್ ಪ್ರಕಾರ, ಸನ್ನಿಹಿತವಾದ ಇರಾನ್ ದಾಳಿಯ ವರದಿಗಳ ನಡುವೆ ಇಸ್ರೇಲಿನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಸಂಜೆ ತುರ್ತು ಸಭೆಯನ್ನು ಕರೆದಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ