ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.
ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್ಎ)ಯಡಿ ದೂರು ದಾಖಲಿಸಿತ್ತು.
ಮಂಗಳವಾರ ಇ.ಡಿ ಅಧಿಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಂಫೋರ್ಸ್ನಮೆಂಟ್ ಕೇಸ್ ಇನ್ಫರ್ಮೇಷನ್ ರಿಪೊರ್ಟ್ (ಇಎಂಎಲ್ಎ) ದೂರು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪವಿದೆ. ಇದಕ್ಕೆ ಸಂಬಂಧಿಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ ಎನ್ನಲಾಗಿದೆ.
ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ.  ಮುಡಾ ನಿವೇಶನಗಳ ಅಕ್ರಮ ಪರಭಾರೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಅಲ್ಲದೆ, ಮುಡಾದಲ್ಲಿದ್ದ 387 ಕೋಟಿ ಹಣವನ್ನು ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ.
14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ಇಸಿಐಆರ್ (ECIR) ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು. ಈಗ ಅದನ್ನು ವಾಪಸ್‌ ಪಡೆಯಲು ಮುಡಾ ಒಪ್ಪಿಗೆ ನೀಡಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement