ಕರ್ನಾಟಕದಲ್ಲಿ ನಾಲ್ಕೈದು ದಿನ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 03 ರಿಂದ ಅಕ್ಟೋಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 7 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಅ.4, 5ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಹಾಸನ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ, ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅ.4ರಂದು ಶಿವಮೊಗ್ಗ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಅಕ್ಟೋಬರ್‌ 7ರ ವರೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಕ್ಟೋಬರ್ 9ರವರೆಗೆ ಕರಾವಳಿಯ ಕೆಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement