ಬೆಂಗಳೂರು : ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮತ್ತು ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ವಿಜಯ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ.
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯ ಟಾಟಾ ಅವರು ಜೆಡಿಎಸ್ ಸೋಷಿಯಲ್ ಮೀಡಿಯಾ ವಿಂಗ್ ಗೆ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ನಂತರ ಆ ಬಗ್ಗೆ ಹೇಳಿಕೆ ನೀಡಿ, 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಇದೀಗ ಕುಮಾರಸ್ವಾಮಿ ಮತ್ತು ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ