ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಾದಿಸುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾಗಬಹುದು. ಹಾಗೆ ಮಾಡಲು ಸಾಧ್ಯವೇ ಎಂದು ದೇವೇಗೌಡ ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಜಿ.ಟಿ.ದೇವೇಗೌಡ ಪ್ರತಿಪಾದಿಸಿದರು. ಈಗಾಗಲೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್​ ವಾಪಸ್​ ಕೊಟ್ಟಿದ್ದಾರಲ್ಲಾ? ಮುಡಾ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಎಲ್ಲದಕ್ಕೂ ಸಿದ್ದರಾಮಯ್ಯ ಕಾರಣ ಅಲ್ಲ. ಎಫ್​ಐಆರ್​ ದಾಖಲಾದ ತಕ್ಷಣ ರಾಜೀನಾಮೆ ಅಗತ್ಯವಿಲ್ಲ ಎಂದು ಜಿಟಿ ದೇವೇಗೌಡ ಹೇಳಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement