ಸುಷ್ಮಾ ಸ್ವರಾಜ್ ಭೇಟಿಯ 9 ವರ್ಷಗಳ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ವಿದೇಶಾಂಗ ಸಚಿವ ಜೈಶಂಕರ

ನವದೆಹಲಿ: ಎಸ್. ಜೈಶಂಕರ ಅವರು ಶಾಂಘೈ ಸಹಕಾರ ಸಂಘಟನೆ (SCO) ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಈ ತಿಂಗಳ ಕೊನೆಯಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಒಂಬತ್ತು ವರ್ಷಗಳ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡುವ ಮೊದಲ ವಿದೇಶಾಂಗ ಸಚಿವರಾಗಿದ್ದಾರೆ. 2015ರಲ್ಲಿ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಶುಕ್ರವಾರ, ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸರ್ಕಾರದ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಳ್ಳಲು ಜೈಶಂಕರ್ ನಿಯೋಗವನ್ನು ಪಾಕಿಸ್ತಾನಕ್ಕೆ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
“ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವರು ನಮ್ಮ ನಿಯೋಗವನ್ನು ಪಾಕಿಸ್ತಾನಕ್ಕೆ ಮುನ್ನಡೆಸಲಿದ್ದಾರೆ” ಎಂದು ಜೈಸ್ವಾಲ್ ಹೇಳಿದರು, ಭೇಟಿಯು ಶೃಂಗಸಭೆಯಲ್ಲಿ ಭಾಗವಹಿಸಲು ಸೀಮಿತವಾಗಿರುತ್ತದೆ ಎಂದು ಒತ್ತಿ ಹೇಳಿದರು. ಆಗಸ್ಟ್‌ನಲ್ಲಿ ನಡೆಯಲಿರುವ ಶೃಂಗ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಆಹ್ವಾನಿಸಿತ್ತು.

ವಿದೇಶಾಂಗ ಜೈಶಂಕರ ಅವರನ್ನು ಶೃಂಗಸಭೆಗಾಗಿ ಪಾಕಿಸ್ತಾನಕ್ಕೆ ಕಳುಹಿಸುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಮುಖವಾದದ್ದು ಎಂದು ಪರಿಗಣಿಸಲಾಗಿದೆ, ಇದು ಫೆಬ್ರವರಿ 2019 ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವಿನ ಬಾಂಧವ್ಯ ಹದಗೆಟ್ಟಿದೆ. ಭಾರತವು ಬಾಲಾಕೋಟದಲ್ಲಿ ಜೈಶ್-ಎ-ಮೊಹಮ್ಮದ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಭಾರತ ತೆಗೆದುಹಾಕುವುದನ್ನು ಪಾಕಿಸ್ತಾನವು ತೀವ್ರವಾಗಿ ವಿರೋಧಿಸಿದ ನಂತರ ಸಂಬಂಧವು ಇನ್ನಷ್ಟು ಹದಗೆಟ್ಟಿತು.
ಈ ವಿಚಾರದಲ್ಲಿ ಪಾಕಿಸ್ತಾನದ ಹಸ್ತಕ್ಷೇಪವನ್ನು ಭಾರತ ಪದೇ ಪದೇ ತರಾಟೆಗೆ ತೆಗೆದುಕೊಂಡಿದೆ ಮತ್ತು ಇದು ಆಂತರಿಕ ವಿಷಯ ಎಂದು ಪುನರುಚ್ಚರಿಸಿದೆ. ಕಳೆದ ವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಜೈಶಂಕರ, ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ನೀತಿ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಎಚ್ಚರಿಸಿದ್ದರು ಮತ್ತು ಅದರ ಆರ್ಥಿಕ ಬಿಕ್ಕಟ್ಟಿನ ಬಗ್ಗೆಯೂ ಪ್ರಸ್ತಾಪಿಸಿದ್ದರು.

ಪ್ರಮುಖ ಸುದ್ದಿ :-   ವಕೀಲೆ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : 20 ಲಕ್ಷ ರೂ. ಕೊಡ್ತೇವೆ ಹೇಳಿ ಕೇವಲ ₹ 1 ಲಕ್ಷ ಕೊಟ್ರು ; ಪೊಲೀಸರಿಗೆ ದೂರು ನೀಡಿದ ವಕೀಲೆಯ ಕೊಲೆ ಆರೋಪಿ...!

ಭಾರತವನ್ನು ಹೊರತುಪಡಿಸಿ, ಎಸ್‌ಸಿಒದಲ್ಲಿ ಚೀನಾ, ರಷ್ಯಾ, ಪಾಕಿಸ್ತಾನ, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸದಸ್ಯ ರಾಷ್ಟ್ರಗಳಾಗಿವೆ ಮತ್ತು ಅತಿದೊಡ್ಡ ಪ್ರಾದೇಶಿಕ ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಒಂದಾಗಿದೆ.
ಎಸ್‌ಸಿಒವನ್ನು 2001 ರಲ್ಲಿ ಶಾಂಘೈನಲ್ಲಿ ನಡೆದ ಶೃಂಗಸಭೆಯಲ್ಲಿ ರಷ್ಯಾ, ಚೀನಾ, ಕಿರ್ಗಿಜ್ ಗಣರಾಜ್ಯ, ಕಝಾಕಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಸ್ಥಾಪಿಸಿದರು ಮತ್ತು 2005 ರಲ್ಲಿ ಭಾರತವು ಮೊದಲ ಬಾರಿಗೆ ವೀಕ್ಷಕ ರಾಷ್ಟ್ರವಾಗಿತ್ತು. ನಂತರ 2017 ರಲ್ಲಿ ಶಾಶ್ವತ ಸದಸ್ಯ ರಾಷ್ಟ್ರವಾಯಿತು.
ಭಾರತವು 2023 ರಲ್ಲಿ ಸಂಸ್ಥೆಯ ಅಧ್ಯಕ್ಷ ಸ್ಥಾನ ವಹಿಸಿತ್ತು. ಆ ವರ್ಷದ ಜುಲೈನಲ್ಲಿ ವರ್ಚುವಲ್ ಸ್ವರೂಪದಲ್ಲಿ ಅದು ಶೃಂಗಸಭೆಯನ್ನು ಆಯೋಜಿಸಿತ್ತು.
ಜೈಶಂಕರ ಭಾಗವಹಿಸಲಿರುವ ಎಸ್‌ಸಿಒ (SCO) ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಕಾನ್ಕ್ಲೇವ್ ಗುಂಪಿನಲ್ಲಿ ಎರಡನೇ ಅತ್ಯುನ್ನತ ವೇದಿಕೆಯಾಗಿದೆ ಆದರೆ ರಾಷ್ಟ್ರದ ಮುಖ್ಯಸ್ಥರ ಶೃಂಗಸಭೆಯು ಉನ್ನತ ವೇದಿಕೆಯಾಗಿದೆ ಮತ್ತು ಸಾಮಾನ್ಯವಾಗಿ ಅದರಲ್ಲಿ ದೇಶದ ಅಧ್ಯಕ್ಷರು ಅಥವಾ ಪ್ರಧಾನ ಮಂತ್ರಿಗಳು ಭಾಗವಹಿಸುತ್ತಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement