ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ “ಆಪರೇಷನ್ ಗುಗಲ್ಧಾರ್” ಅಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಎಂದು ಸೇನೆ ಶನಿವಾರ ಬೆಳಿಗ್ಗೆ ತಿಳಿಸಿದೆ.
ಉಗ್ರರನ್ನು ಹತ್ಯೆ ಮಾಡುವ ಮೊದಲು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರನ್ನು ಹತ್ಯೆ ಮಾಡಲಾಗಿದ್ದು ಅವರಿಗೆ ಸೇರಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಅಕ್ಟೋಬರ್ 4ರಂದು, ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜೆ &ಕೆ ಪೊಲೀಸರು ಕುಪ್ವಾರಾದ ಗುಗಲ್ಧಾರ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಾಗೃತ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಿ ಸವಾಲು ಹಾಕಿದವು, ಇದು ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಗೆ ಕಾರಣವಾಯಿತು ಎಂದು ಸೇನೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ