ಕಾರವಾರ : ಪ್ರವಾಸಕ್ಕೆ ಬಂದಿದ್ದ ವೇಳೆ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಮುದ್ರದ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳಕ್ಕೆ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಮುಳುಗಿದ್ದಾರೆ. ಧನುಷ್ ಎಂಬ ವಿದ್ಯಾರ್ಥಿಯನ್ನು ಗಮನಿಸಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಬೋಟ್ ಕೊಂಡೊಯ್ದು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಈಜಲು ಸಮುದ್ರಕ್ಕೆ ಇಳಿದ ಬಗ್ಗೆ ಅವರಿಗೆ ಗೊತ್ತಾಗಲಿಲ್ಲ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಲೈಫ್ ಗಾರ್ಡ್ ಹಾಗೂ ಓಷಿಯನ್ ಅಡ್ವೆಂಚರ್ಸ ತಂಡದವರು ಹುಡುಕಾಡಿದರೂ ಆತನ ರಕ್ಷಣೆ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ