ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾದ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂದೆಯೂ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್‌ 6ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿಅಕ್ಟೋಬರ್‌ 6ರಿಂದ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement