ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಕಡತ ಒಯ್ದಿದ್ದಾರೆ : ಬೈರತಿ ಸುರೇಶ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ (MUDA Scam) ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ (Byrathi Suresh) ವಿರುದ್ಧ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ಭಾನುವಾರ ಇಮೇಲ್‌ ಮೂಲಕ ಇವರ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಇಂದು, ಸೋಮವಾರ ಖುದ್ದು ಡಿಜಿಪಿ ಅವರನ್ನು ಭೇಟಿಯಾಗಿ ದೂರು ನೀಡಲು ಸಮಯ ಕೇಳಿದ್ದಾರೆ.

ಲೋಕಾಯುಕ್ತ ನೀಡಿದ್ದ ಸರ್ಚ್​ ವಾರಂಟ್​ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು. ಇದರಿಂದ ಬೈರತಿ ಸುರೇಶ್ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಿ‌ 26-7-2024 ರಂದು ಮುಡಾದ ದಾಖಲೆಗಳನ್ನ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದಾರೆ. ಸಚಿವರು ದಾಖಲೆಗಳನ್ನ ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್...! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement