ಮತಗಟ್ಟೆ ಸಮೀಕ್ಷೆಗಳು ಠುಸ್‌ : ಹರ್ಯಾಣದಲ್ಲಿ ಬಿಜೆಪಿ ಮ್ಯಾಜಿಕ್‌ ; ಹ್ಯಾಟ್ರಿಕ್‌ ಗೆಲುವಿನತ್ತ ಕಮಲ ಪಕ್ಷ…!

ನವದೆಹಲಿ : ಹರ್ಯಾಣದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳು ತಲೆಕೆಳಗಾಗುವುದು ಬಹುತೇಕ ನಿಚ್ಚಳವಾಗಿದ್ದು, ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಮಂಗಳವಾರ ಮಧ್ಯಾಹ್ನ 12:55ರ ಹೊತ್ತಿಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುಂದಿದ್ದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ.
ಏಳು ಎಕ್ಸಿಟ್ ಪೋಲ್‌ಗಳ ಪ್ರಕಾರ ಕಾಂಗ್ರೆಸ್ 55 ಸ್ಥಾನಗಳನ್ನು ಗೆಲ್ಲುತ್ತದೆ, ಹಾಗೂ ಸುಲಭವಾಗಿ ಬಹುಮತ ಪಡೆಯುತ್ತದೆ ಎಂದು ಹೇಳಿದ್ದವು. ಅರ್ಧದಷ್ಟು ಹಾಗೂ ಆಡಳಿತಾರೂಢ ಬಿಜೆಪಿ ಕೇವಲ 26 ರಲ್ಲಿ ಮಾತ್ರ ಗೆಲುವು ಸಾಧಿಸುತ್ತದೆ ಎಂದು ಹೇಳಿತ್ತು.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಟ್ರೆಂಡ್‌ಗಳು ಇದನ್ನೇ ಹೇಳಿದ್ದವು. ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಸಂಭ್ರಮಾಚರಣೆ ಆರಂಭವಾಗಿತ್ತು. ಆದರೆ ಮತ ಎಣಿಕೆ ಆರಂಭವಾದ ಒಂದು ತಾಸಿನ ನಂತರ ಬಿಜೆಪಿ ಲೀಡ್‌ ಪಡೆಯುತ್ತ ಹೋಯಿತು.

ಸರಳ ಬಹುಮತ(46) ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಪಡೆದಿದಿದೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುವ ಸೂಚನೆಯ ನಂತರ, ಕಾಂಗ್ರೆಸ್ ಬೆಂಬಲಿಗರು ಸಂಭ್ರಮಾಚರಣೆಯನ್ನು ನಿಲ್ಲಿಸಿದರು. ಆದರೆ ಪಕ್ಷವು ಹರ್ಯಾಣದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದೆ. ಇತ್ತ ಬಿಜೆಪಿಯ ಹಿರಿಯ ನಾಯಕರು ಸರ್ಕಾರ ರಚನೆಯ ಕುರಿತು ಚರ್ಚಿಸಲು ನವದೆಹಲಿಯಲ್ಲಿರುವ ಖಟ್ಟರ್ ಅವರ ನಿವಾಸದಲ್ಲಿ ಜಮಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ಪಕ್ಷದ ಹರಿಯಾಣ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಅದರಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಲಾಗಿದೆ.
ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ
ಏತನ್ಮಧ್ಯೆ, ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಹರಿಯಾಣ ಚುನಾವಣೆಯ ಫಲಿತಾಂಶಗಳನ್ನು ನವೀಕರಿಸುವಾಗ “ವಿವರಿಸಲಾಗದ ನಿಧಾನ” ಅನುಸರಿಸಲಾಗಿದೆ ಎಂದು ದೂರಿದೆ. ಬಹುತೇಕ ಮತ ಎಣಿಕೆ ಕೇಂದ್ರಗಳಲ್ಲಿ ಇನ್ನೂ ಎಣಿಕೆ ನಡೆಯುತ್ತಿರುವ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ ರಮೇಶ ಪತ್ರದಲ್ಲಿ ಬರೆದಿದ್ದಾರೆ.
2019 ರ ಫಲಿತಾಂಶ
2019 ರಲ್ಲಿ ಹರಿಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 40 ಸ್ಥಾನಗಳನ್ನು ಗೆದ್ದಿತ್ತು, ಕಾಂಗ್ರೆಸ್ 31 ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. JJP ಬೆಂಬಲದೊಂದಿಗೆ ಬಿಜೆಪಿ ಸರ್ಕಾರವನ್ನು ರಚಿಸಿತು ಮತ್ತು ದುಶ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾದರು. ಸೈನಿ ಮುಖ್ಯಮಂತ್ರಿಯಾದ ನಂತರ ಮೈತ್ರಿ ಕೊನೆಗೊಂಡಿತು.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement