ನವದೆಹಲಿ: ಅಕ್ಟೋಬರ್ 16 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ 15 ಸದಸ್ಯರ ತಂಡವನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ.
ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ T20I ಸರಣಿಯಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದ ವೇಗಿ ಮಯಾಂಕ್ ಯಾದವ್ ಅವರನ್ನು ಕಾಯ್ದಿಟ್ಟ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಬಾಂಗ್ಲಾದೇಶ ಟೆಸ್ಟ್ ಸರಣಿಯ ಭಾಗವಾಗಿದ್ದ ಎಡಗೈ ವೇಗಿ ಯಶ್ ದಯಾಲ್ ಅವರು ಲಕ್ನೋದಲ್ಲಿ ಬಂಗಾಳ ವಿರುದ್ಧ ಉತ್ತರ ಪ್ರದೇಶದ ರಣಜಿ ಟ್ರೋಫಿ ಪಂದ್ಯದ ವೇಳೆ ಭುಜದ ಗಾಯಕ್ಕೆ ಒಳಗಾದ ಕಾರಣ ತಂಡವನ್ನು 15 ಕ್ಕೆ ಇಳಿಸಲಾಗಿದೆ.
ಮಯಾಂಕ್ ಅವರಲ್ಲದೆ, ಹರ್ಷಿತ್ ರಾಣಾ, ನಿತೀಶ ಕುಮಾರ ರೆಡ್ಡಿ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ಕಾಯ್ದಿಟ್ಟ ಆಟಗಾರರ ಪಟ್ಟಿಯಲ್ಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಕುಲದೀಪ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ ದೀಪ
ಕಾಯ್ದಿಟ್ಟ ಆಟಗಾರರು: ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ
ನಿಮ್ಮ ಕಾಮೆಂಟ್ ಬರೆಯಿರಿ