ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ.
ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ, ಸುರೇಶಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಎಂ. ಚಂದ್ರಶೇಖರ ಭ್ರಷ್ಟ ಅಧಿಕಾರಿಯಾಗಿದ್ದು, ಅವರ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಕೇಳಿಸಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿದ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ನಂತರ ಕುಮಾರಸ್ವಾಮಿ ಆಪ್ತ ಸುರೇಶಬಾಬು ನನ್ನ ಮೇಲೆ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸಹ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಎಂದು ಚಂದ್ರಶೇಖರ ದೂರಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ