ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದು ಈಗ ವಿವಾದಕ್ಕೆ ಕಾರಣವಾಗಿದೆ.
ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಗಲಭೆ ಪ್ರಕರಣವನ್ನು ಕಾನೂನು ಮತ್ತು ಪೊಲೀಸ್ ಇಲಾಖೆಗಳ ವಿರೋಧದ ನಡುವೆಯೂ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂದು ಹೇಳಿದ್ದಾರೆ.

ಪೊಲೀಸರ ಮೇಲೆ ದಾಳಿ ಮಾಡಿ ಠಾಣೆಗೆ ನುಗ್ಗುವುದಾಗಿ ಬೆದರಿಕೆ ಹಾಕಿದ್ದರು. ಈ ಗಲಭೆ ಮತ್ತು ಕಲ್ಲು ತೂರಾಟದಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಈಗ ಈ ಪ್ರಕರಣವನ್ನು ಕೈ ಬಿಡಲಾಗಿದೆ. ಇದು ಮುಸ್ಲಿಂ ಓಲೈಕೆಯ ಕಾಂಗ್ರೆಸ್‌ ರಾಜಕೀಯವಲ್ಲದೆ ಮತ್ತೇನೂ ಅಲ್ಲ ಎಂದು ಮಾಳವೀಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದೀಶ ಶೆಟ್ಟರ ವಾಗ್ದಾಳಿ…
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು, ಯಾವ ಪ್ರಕರಣ ವಾಪಸ್ ಪಡೆಯಬೇಕು, ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಮೇಲಿನ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ ವಾಗ್ದಾಳಿ ನಡೆಸಿದರು.
ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಪ್ರಕರಣ ಪಡೆಯುತ್ತಾರೆ. ರೈತರ ಹೋರಾಟದ ಪ್ರಕರಣಗಳನ್ನು ವಾಪಸ್ ಪಡೆದರೆ ಸರಿ. ಆದರೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದವರ ಪ್ರಕರಣಗಳನ್ನು ವಾಪಸ್ ಪಡೆದಿದ್ದು ಸರಿಯಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಬೆಂಬಲ ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.
ಪ್ರಕರಣ ನೋಡಿದರೆ ಆ ಕೇಸನ್ನು ವಾಪಸ್ ಪಡೆಯಲು ಬರುವುದಿಲ್ಲ. ಆದರೂ ಕ್ಯಾಬಿನೆಟ್‌ನಲ್ಲಿ ಹಿಂಪಡೆಯಲು ಒಪ್ಪಿಗೆ ನೀಡಲಾಗಿದೆ. ಇದು ಕಾನೂನು ಬಾಹಿರ. ಕೋರ್ಟ್‌ನಲ್ಲಿ ಯಾರಾದರೂ ಇದನ್ನು ಪ್ರಶ್ನಿಸಿದರೆ ಸರ್ಕಾರದ ನಿರ್ಧಾರ ಕೋರ್ಟ್‌ನಲ್ಲಿ ನಿಲ್ಲುವುದು ಕಷ್ಟ. ಇದು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಹೇಳಿದರು.
ಏನಿದು ಪ್ರಕರಣ?
ಏಪ್ರಿಲ್ 16 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ ನಂತರ ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್...! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement