ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : 5 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕ, ಗೋವಾ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 6 ದಿನಗಳವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಆಕ್ಟೊಬರ್ 11 ರಿಂದ 14 ರವರೆಗೆ ಸಾಧಾರಣದಿಂದ ಬಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆಯಾಗಲಿದೆ. ಇನ್ನು ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಕ್ಟೋಬರ್‌ 15 ಮತ್ತು 16 ರಂದು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು,ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್‌ 11 ರಿಂದ 16 ರವರೆಗೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement