ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಬಾಬಾ ಸಿದ್ದಿಕ್ ಹತ್ಯೆಯ ಹೊಣೆಗಾರಿಕೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೆಂದು ಹೇಳಿಕೊಂಡ ಸಾಮಾಜಿಕ ಮಾಧ್ಯಮದ ವೈರಲ್ ಪೋಸ್ಟ್ ಅನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಕೆಲವು ಬಿಷ್ಣೋಯ್ ಗ್ಯಾಂಗ್ ಸದಸ್ಯರನ್ನು ಬಂಧಿಸಲಾಗಿತ್ತು.
ಮುಂಬೈ ಪೊಲೀಸರ ಪ್ರಕಾರ, ಕೊಲೆಯಲ್ಲಿ ಭಾಗಿಯಾಗಿದ್ದ ಮೂವರು ಶೂಟರ್‌ಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ ಎಂದು ಗುರುತಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮೂರನೇ ಶೂಟರ್ ಶಿವಕುಮಾರ ಎಂದು ಗುರುತಿಸಲಾಗಿದ್ದು, ಈತ ಮತ್ತು ಹ್ಯಾಂಡ್ಲರ್ ಎಂದು ನಂಬಲಾದ ನಾಲ್ಕನೇ ವ್ಯಕ್ತಿ ಪರಾರಿಯಾಗಿದ್ದಾರೆ.
ಮೂಲಗಳ ಪ್ರಕಾರ ಶಂಕಿತ ಆರೋಪಿಗಳು ಸಿದ್ದಿಕ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ತಿಂಗಳುಗಳಿಂದ ನಿಗಾ ಇರಿಸಿದ್ದರು. ದಾಳಿ ನಡೆಸಲು ಹಂತಕರಿಗೆ ತಲಾ 50,000 ರೂ.ಗಳನ್ನು ಮುಂಗಡವಾಗಿ ನೀಡಲಾಗಿತ್ತು ಮತ್ತು ದಾಳಿಯ ಕೆಲವೇ ದಿನಗಳ ಮೊದಲು ಶಸ್ತ್ರಾಸ್ತ್ರಗಳನ್ನು ಅವರಿಗೆ ತಲುಪಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತು ಸಹಚರರಿಂದ ಪದೇ ಪದೇ ಬೆದರಿಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರೊಂದಿಗೆ ಸಿದ್ದಿಕ್ ನಿಕಟ ಒಡನಾಟವನ್ನು ಹೊಂದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement