ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅಕ್ಟೋಬರ್‌ 15 ಹಾಗೂ 16ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಕ್ಟೋಬರ್‌ ೧೭ರಂದು ಅತಿ ಭಾರಿ ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಕ್ಟೋಬರ್‌ 15ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಕ್ಟೋಬರ್‌ 16ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಅಕ್ಟೋಬರ್‌ 17ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ರಾಮನಗರ ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಅಕ್ಟೋಬರ್‌ 17 ಹಾಗೂ 18ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಕ್ಟೋಬರ್‌ 17ರಂದು ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement