ಬೆಂಗಳೂರು: ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಮೃತರನ್ನು ಪತಿ ಅವಿನಾಶ (33), ಪತ್ನಿ ಮಮತಾ (30), ಮಕ್ಕಳಾದ ಆಧೀಯ(5) ಮತ್ತು ಅನಯಾ (3) ಎಂದು ಗುರುತಿಸಲಾಗಿದೆ.
ಅವಿನಾಶ್ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದು, ಪತ್ನಿ ಮಮತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು ಎಂದು ಗೊತ್ತಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಕಲಬುರಗಿ ಮೂಲದರಾದ ಇವರು ಕಳೆದ 6 ವರ್ಷಗಳ ಹಿಂದೆ ಯಲಹಂಕದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇಂದು, ಸೋಮವಾರ ಬೆಳಿಗ್ಗೆ ಮೃತನ ಸಹೋದರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ರಾಜಾನುಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ