ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಎಲ್ಲಾ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್‌ ಸಿಬ್ಬಂದಿ ಅವರ ಜೊತೆಯಲ್ಲಿ ಇರುತ್ತಾರೆ.

ಸಲ್ಮಾನ್ ಖಾನ್ ಅವರು ಚಿತ್ರೀಕರಣಕ್ಕಾಗಿ ಭೇಟಿ ನೀಡುವ ಯಾವುದೇ ಪ್ರದೇಶದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಇದರ ಬಗ್ಗೆ ಸೂಚನೆ ನೀಡಲಾಗುತ್ತದೆ. ಪೊಲೀಸ್ ತಂಡವು ಶೂಟಿಂಗ್ ಸ್ಥಳವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಗಾರಿಕೆಯನ್ನು ವಹಿಸಿಕೊಂಡ ನಂತರ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್‌ ಅವರು ಸಲ್ಮಾನ್‌ ಖಾನ್‌ ಅವರ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಸಲ್ಮಾನ್‌ ಖಾನ್‌ ಹಲವು ವರ್ಷಗಳಿಂದ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಹಲವಾರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ʼವಂದೇ ಮಾತರಂ'ಗೆ ಅವಮಾನಿಸಿದರೆ ಜೈಲು ಶಿಕ್ಷೆ: ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement