ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ.
ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು ಬೆನ್ನಟ್ಟಿ ಓಡುತ್ತಿರುವುದು ಕಂಡುಬಂದಿದೆ. ಆದಾಗ್ಯೂ, ಪೊಲೀಸ್ ಸಿಬ್ಬಂದಿ ತಕ್ಷನವೇ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನೆರವಿಗೆ ಬಂದಿರು. ಹಾಗೂ ಉದ್ರಿಕ್ತ ಗುಂಪಿನಿಂದ ಪಾರು ಮಾಡಿ ಕರೆದೊಯ್ದರು.

ಹಿಸ್ಟರಿ ಶೀಟರ್ ಕ್ರಿಮಿನಲ್ ಒಬ್ಬ ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಮಗಳನ್ನು ಕೊಂದ ನಂತರ ಸೂರಜಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಅಪರಾಧಿಯು ಹೆಡ್ ಕಾನ್‌ಸ್ಟೆಬಲ್‌ನನ್ನು ವಾಹನದಡಿಯಲ್ಲಿ ಹತ್ತಿಸಲು ಪ್ರಯತ್ನಿಸಿದ್ದಾನೆ ಮತ್ತು ಆತನ ಸಹೋದ್ಯೋಗಿಯ ಮೇಲೆ ಬಿಸಿ ಎಣ್ಣೆಯನ್ನು ಎರಚಿದ್ದಾನೆ
ಹೆಡ್ ಕಾನ್‌ಸ್ಟೆಬಲ್ ತಾಲಿಬ್ ಶೇಖ್ ಅವರ ಪತ್ನಿ ಮೆಹನಾಜ್ (35) ಮತ್ತು ಮಗಳು ಅಲಿಯಾ (11) ಅವರ ಮೃತದೇಹಗಳು ಸೋಮವಾರ ಸಿಟಿ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವರ ಮನೆಯಿಂದ 4 ಕಿಮೀ ದೂರದಲ್ಲಿರುವ ಪಿಧಾ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ. ಭಾನುವಾರ ನಡೆದ ದುರ್ಗಾ ವಿಗ್ರಹ ನಿಮಜ್ಜನ ಮೆರವಣಿಗೆಯಲ್ಲಿ ನಿಯೋಜನೆಗೊಂಡಿದ್ದ ಕಾನ್‌ಸ್ಟೆಬಲ್‌ ಒಬ್ಬರ ಮೇಲೆ ಹಿಸ್ಟರಿ ಶೀಟರ್ ಕುದೀಪ ಸಾಹು ಬಿಸಿ ಎಣ್ಣೆ ಎರಚಿದ ನಂತರ ಈ ಘಟನೆ ನಡೆದಿದೆ.

ಆರೋಪಿಗಳು ಬಿಸಿ ಎಣ್ಣೆ ಎರಚಲು ಘಟನಾ ಸ್ಥಳಕ್ಕೆ ಆಗಮಿಸಿದಾಗ ನಾಲ್ಕು ಚಕ್ರದ ವಾಹನವನ್ನು ಶೇಖ್ ಮತ್ತು ಇತರ ಪೊಲೀಸ್ ಸಿಬ್ಬಂದಿ ಮೇಲೆ ಹತ್ತಿಸಲು ಪ್ರಯತ್ನಿಸಿದ್ದಾನೆ. ಆದರೆ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
“ಶೇಖ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದಾಗ, ಮನೆಯ ಬಾಗಿಲು ಮುರಿದಿದ್ದು, ಆತನ ಹೆಂಡತಿ ಮತ್ತು ಮಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಮನೆಯೊಳಗೆ ರಕ್ತದ ಕಲೆಗಳನ್ನು ನೋಡಿದ ಅವರು ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಹುಡುಕಾಟವನ್ನು ಪ್ರಾರಂಭಿಸಲಾಯಿತು ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳು ಹರಿತವಾದ ಆಯುಧದಿಂದ ತಾಯಿ-ಮಗಳಿಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಯಿಂದ ಕೋಪಗೊಂಡ ಜನಸಮೂಹವು ಸಾಹು ಅವರ ಮನೆಗೆ ಧ್ವಂಸಗೊಳಿಸಿತು ಮತ್ತು ಬೆಂಕಿ ಹಚ್ಚಿತು. ಬೆನ್ನಟ್ಟಿದ ಸಂದರ್ಭದಲ್ಲಿ ಆರೋಪಿಗಳು ಪೊಲೀಸರತ್ತ ಗುಂಡು ಹಾರಿಸಿದ್ದು, ಪೊಲೀಸರು ಮತ್ತೆ ಗುಂಡು ಹಾರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಆರೋಪಿ ಪರಾರಿಯಾಗಿದ್ದಾನೆ. ಸಾಹುವನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಪ್ರಮುಖ ಸುದ್ದಿ :-   ಆರ್‌.ಜಿ. ಕರ್ ಕಾಲೇಜ್‌ ವೈದ್ಯೆ ಅತ್ಯಚಾರ-ಕೊಲೆ ಪ್ರಕರಣ ; ಮಾಜಿ ಪ್ರಾಂಶುಪಾಲ ಸಂದೀಪ ಘೋಷ್‌ ಗೆ ಜಾಮೀನು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement