ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣಾಧೀನ ನ್ಯಾಯಾಲಯವು ಸೋಮವಾರ ದರ್ಶನ್‌ಗೆ ಜಾಮೀನು ನಿರಾಕರಿಸಿತ್ತು. ದರ್ಶನ್‌ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್‌ ಸುನಿಲಕುಮಾರ ತಿಳಿಸಿದ್ದಾರೆ.
ದರ್ಶನ್‌ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು ಹಿತಾಸಕ್ತಿ ಹೊಂದಿದ್ದಾರೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಸ್ಥಳದಲ್ಲಿ ದರ್ಶನ್‌ ಇದ್ದರು ಎಂಬುದಕ್ಕೆ ಸಾಕ್ಷಿ ಇದೆ. ರೇಣುಕಾಸ್ವಾಮಿಯನ್ನು ಹೀನಾಯವಾಗಿ ಕೊಲೆ ಮಾಡಲಾಗಿದೆ ಎಂಬುದರ ಬಗ್ಗೆ ಮರಣೋತ್ತರ ಪರೀಕ್ಷೆಯಲ್ಲಿ ವಿವರಿಸಲಾಗಿದೆ ಎಂದು ಪ್ರಾಸಿಕ್ಯೂಷನ್‌ ಪ್ರಬಲವಾಗಿ ವಾದಿಸಿತ್ತು. ನಟ ದರ್ಶನ್‌, ಪವಿತ್ರಾ ಗೌಡ, ದರ್ಶನ್‌ ವ್ಯವಸ್ಥಾಪಕ ಆರ್‌ ನಾಗರಾಜು ಮತ್ತು ಎಂ ಲಕ್ಷ್ಮಣ ಅವರ ಜಾಮೀನು ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯವು ಸೋಮವಾರ ತಿರಸ್ಕರಿಸಿತ್ತು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement