ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

ಬೆಂಗಳೂರು : ಬೆಂಗಳೂರಿನಲ್ಲಿ ಮಂಗಳವಾರ ದಿನವಿಡೀ ಭಾರಿ ಮಳೆ ಸುರಿದಿದ್ದು, ಹವಾಮಾನ ಇಲಾಖೆಯ ಪ್ರಕಾರ ಮಳೆ ಬುಧವಾರ (ಅಕ್ಟೋಬರ್ 16) ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಎಲ್ಲ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ,
ಬುಧವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ದಿನವಿಡೀ ಮಳೆ ಸುರಿಯುತ್ತಲೇ ಇದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಜಗದೀಶ ಅವರು ಅಕ್ಟೋಬರ್ 16ರಂದು (ನಾಳೆ) ಬೆಂಗಳೂರಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಬಹುತೇಕ ಶಾಲೆಗಳು ದಸರಾ ರಜೆ ನೀಡಿವೆ. ಕೆಲ ಖಾಸಗಿ ಶಾಲೆಗಳು ಹಾಗೂ ಕಾಲೇಜುಗಳು ನಡೆಯುತ್ತಿದ್ದವು. ಭದ್ರತಾ ದೃಷ್ಟಿಯಿಂದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement