ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಜಾನನ ಹಿರೇಮಠ (46) ಎಂಬವರು ಮೃತ ಶಿಕ್ಷಕರಾಗಿದ್ದಾರೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ ಒಮ್ಮೆಗೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುತ್ತಿರುವಾಗಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ