ದೇವೇಗೌಡರನ್ನೇ ಸೋಲಿಸಿದ ನನಗೇ ಟಿಕೆಟ್ ಕೊಡಿ : ಸಿದ್ದರಾಮಯ್ಯಗೆ ತೇಜಸ್ವಿನಿ ಗೌಡ ಪತ್ರ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ತೀವ್ರತೆ ಪಡೆದುಕೊಂಡಿದೆ. ಇದರ ಮಧ್ಯೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ತಾನೂ ಟಕೆಟ್‌ ಆಕಾಂಕ್ಷಿಯಾಗಿದ್ದು, ತಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಪತ್ರ ಬರೆದಿದ್ದಾರೆ.
ಬಿಜೆಪಿಯಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್‌ಗೆ ಮರಳಿದ್ದಾರೆ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ಈ ಕುರಿತು ಅವರು ಪಕ್ಷದ ನಾಯಕರಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬರುತ್ತಿದೆ. ಇದರ ನಡುವೆಯೇ ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ( ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ತಮಗೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. 2004 ರಲ್ಲಿ ನಾನು ಬೆಂಗಲೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದೇನೆ. ೨೦೦೯ರಲ್ಲಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿದ್ದೇನೆ ಎಂದು ಹೇಳಿಕೊಂಡಿರುವ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ತಾನೂ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. 2004 ರ ಲೋಕಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಪಡೆದ ಅಗಾಧ ಬೆಂಬಲವನ್ನು ನೆನಪಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement