ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟಿನಿಂದ ದೊಡ್ಡ ರಿಲೀಫ್‌

ನವದೆಹಲಿ:  ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಭವಾನಿ ರೇವಣ್ಣಗೆ (Bhavani Revanna) ರಿಲೀಫ್‌ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ.
ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ವಿಭಾಗೀಯ ಪೀಠ ತಿರಸ್ಕರಿಸಿದೆ.
ರಾಜ್ಯ ಸರ್ಕಾರದ ಮೇಲ್ಮನವಿಗೆ ಸಂಬಂಧಿಸಿದಂತೆ ಕಳೆದ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಭವಾನಿ ರೇವಣ್ಣ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು.

2024ರ ಜೂನ್‌ ನಲ್ಲಿ ಕರ್ನಾಟಕ ಹೈಕೋರ್ಟ್‌ ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ ನೇತೃತ್ವದ ಪೀಠ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.
ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ರಾಜಕೀಯ ಕುಟುಂಬ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣುತ್ತಿಲ್ಲ ಎಂದು ಕೋರ್ಟ್‌ ಹೇಳಿದೆ.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement