ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಯತ್ನಾಳ್ ಅವರು ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬವರು ವಿಜಯಪುರದ ಗಾಂಧಿ ಚೌಕ ಠಾಣೆಯಲ್ಲಿ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ.
ಅಲ್ಲದೆ, ನಗರದ ಶಾಂತಿ ಸೌಹಾರ್ದ ಹಾಳು ಮಾಡುವ ಉದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹಿಯಾಳಿಸಿ ಮಾತನಾಡಿದ್ದಾರೆ. ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ (U/s-352,353(2)) ಕಲಂ ಅಡಿ ದೂರು ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement