ಕಲಬುರಗಿ : ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ ವಲ್ಯಾಪುರೆ ಅವರ ಮನೆ ಮೇಲೆ ಸಿಐಡಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿರುವ ಸುನಿಲ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರೆ 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ವಿನಯ ಅವರು 2022ರಲ್ಲಿ ನಿಗಮದ ನಾನಾ ಯೋಜನೆಗಳಿಗೆ ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ನಿಗಮದ ಹಣವನ್ನು ತಮ್ಮ ಒಡೆತನದ ಸೋಮನಾಥೇಶ್ವರ ಎಂಟರ್ಪ್ರೈಸಸ್‌ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಾಗಿತ್ತು.
2ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಸರ್ಚ್ ವಾರೆಂಟ್ ಪಡೆದ ಸಿಐಡಿ, ನಗರದ ಸಂತೋಷ್ ಕಾಲೊನಿಯಲ್ಲಿನ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.
2022 ರಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿತ್ತು. ನಿಗಮದ ಯೋಜನೆಗಳಿಗೆ ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ನಿಗಮದ ಹಣವನ್ನು ವಿನಯ್ ವಲ್ಯಾಪುರೆ ತಮ್ಮ ಒಡೆತನದ ಸೋಮನಾಥೇಶ್ವರ ಎಂಟರ್ಪ್ರೈಸಸ್ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರು ದಾಖಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ