ಬೆಳಗಾವಿ : ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ ಮೇಲ್ ಮೂಲಕ ಅಪರಿಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ.
ಸಾಂಬ್ರಾ ‌ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಈ ಬೆದರಿಕೆ ಪತ್ರ ಬಂದಿದೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಶ್ವಾನದಳ, ಬಾಂಬ್ ಪತ್ತೆ ದಳದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಿದ್ದಾರೆ. ಇಡೀ ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ತಪಾಸಣೆ ಮಾಡಲಾಗಿದೆ. ಈ ವೇಳೆ ಏನೂ ಸಿಕ್ಕಿಲ್ಲ. ಬೆದರಿಕೆ ಇ ಮೇಲ್‌ ಕಳುಹಿಸಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ತ್ಯಾಗರಾಜ್ ಅವರು ಈ ಬಗ್ಗೆ ಪೊಲೀಸರಿಗೆ ಅಗತ್ಯ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   'ನಾನು ಪ್ರೀತಿಯಿಂದ ಹೇಳಿದ್ದೇನೆ...ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ...ನಾನು ಕ್ಷಮೆ ಕೇಳಲ್ಲ': 'ತಮಿಳು-ಕನ್ನಡ' ಹೇಳಿಕೆಗೆ ಕಮಲ ಹಾಸನ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement