ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆಗಾಗಿ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಯೋಗೇಶ್ವರ ರಾಜೀನಾಮೆ..?

ಬೆಂಗಳೂರು: ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ (CP Yogeshwara) ಅವರು ವಿಧಾನ ಪರಿಷತ್ ಸ್ಥಾನಕ್ಕೆ (MLC) ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸಂಬಂಧ ಇಂದು ಸೋಮವಾರ (ಅ.21) ರಾಜೀನಾಮೆ   ಸಲ್ಲಿಸಲು   ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (Channapatna By Election) ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರು, ಟಿಕೆಟ್‌ ತಮಗೆ ದೊರೆಯುವುದಿಲ್ಲ ಎಂದು ಖಚಿತವಾಗುತ್ತಿದ್ದಂತೆ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲು ಹುಬ್ಬಳ್ಳಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ಯೋಗೇಶ್ವರ್​ ವ್ಯಕ್ತಪಡಿಸಿದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ಜೆಡಿಎಸ್ ಒಪ್ಪದ ಕಾರಣ ಅವರು ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸದ್ಯಕ್ಕೆ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಯೋಗೇಶ್ವರ​, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ಕುಮಾರಸ್ವಾಮಿ 3 ದಿನಗಳಿಂದ ಚರ್ಚಿಸುತ್ತಿದ್ದೇವೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಬಯಕೆ ಇದೆ. ಅದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅವರ ಮನಸ್ಸಲ್ಲಿ ಆ ಭಾವನೆ ಇರುವಾಗ ಏನು ಮಾಡಲು ಸಾಧ್ಯ? ಜೆಡಿಎಸ್ ಚಿಹ್ನೆಯಲ್ಲಿ ನಿಲ್ಲಲಿ ಎಂದು ಅವರು ಮುಕ್ತವಾಗಿ ಹೇಳಿಲ್ಲ. ನಾನು ನನ್ನ ತಾಲೂಕಿನ ಜನರ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಜೆಡಿಎಸ್‌ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ. ಬಿಜೆಪಿಯಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಬೆಂಬಲ ಸಿಗುತ್ತಿಲ್ಲ ಎಂದು ಯೋಗೇಶ್ವರ ಹೇಳಿದ್ದಾರೆ

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement