ಭಾರೀ ಮಳೆ ; ಬುಧವಾರ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬುಧವಾರ (ಅಕ್ಟೋಬರ್‌ ೨೩) ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮೋರಿಗಳು, ಕಾಲುವೆಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದ್ದರಿಂದ ಜಿಲ್ಲಾಧಿಕಾರಿಗಳು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement