ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಯೋಗೇಶ್ವರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಅವರು ಕಾಂಗ್ರೆಸ್‌ ಪಕ್ಷದಿಂದ ನಾಳೆ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಮನಗರ ಜಿಲ್ಲೆಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಯೋಗೇಶ್ವರ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಯೋಗೇಶ್ವರ ರಾಜಕಾರಣ ಆರಂಭಿಸಿದ್ದೆ ಕಾಂಗ್ರೆಸ್ ನಿಂದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ ಹೇಳಿದ್ದಾರೆ. ತಿಳಿಸಿದ್ದಾರೆ.
ಇನ್ನೂ ಕಾಂಗ್ರೆಸ್ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಸಚಿವ ಯೋಗೇಶ್ವರ, ನಾನು ಯಾವುದೇ ಒತ್ತಡ ಹಾಗೂ ಷರತ್ತು ಇಲ್ಲದೆ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ, ಈ ಹಿಂದೆ ನಾನು ಡಿ.ಕೆ ಶಿವಕುಮಾರ ಸಮ್ಮುಖದಲ್ಲಿ ರಾಜಕೀಯ ಆರಂಭಿಸಿದ್ದೆ. ಈಗ ಮತ್ತೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ; ಸಿಎಂ ಸಿದ್ದರಾಮಯ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement