ನವದೆಹಲಿ : ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ಇಂದು ಗುರುವಾರ (ಅಕ್ಟೋಬರ್ 24) ಅಭ್ಯರ್ಥಿಯನ್ನು ಪ್ರಕಟಿಸಿದೆ. ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಈಗ ಉಪಚುನಾವಣೆಗೂ ಸಹ ಕಾಂಗ್ರೆಸ್ ಅವರಿಗೇ ಮಣೆ ಹಾಕಿದೆ.ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದೆ.
ಟಿಕೆಟ್‌ಗಾಗಿ ಕಾಂಗ್ರೆಸ್ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬಲವಾದ ಒತ್ತಾಯ ಕೇಳಿಬಂದಿತ್ತು.
ಅಲ್ಪಸಂಖ್ಯಾ ಸಮುದಾಯದಲ್ಲಿಯೂ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆದಿತ್ತು. ಮಾಜಿ ಶಾಸಕ ಅಜ್ಜಂಪೀಋ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಅವರು ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದರು. ಅಂತಿಮವಾಗಿ ಹೈಕಮಾಂಡ್ ಯಾಸೀರ್ ಖಾನ್ ಪಠಾಣ್ ಅವರಿಗೆ ಮತ್ತೆ ಮಣೆ ಹಾಕಿದೆ. ಬಿಜೆಪಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ