ವಿಧಾನ ಪರಿಷತ್​ ಉಪಚುನಾವಣೆ ; ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ
ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರ ತೆರವಾಗಿದ್ದರಿಂದ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು (ಅ.24) ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರಕುಮಾರ ಪುತ್ತೂರು ಅವರು 1,697 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಿಶೋರಕುಮಾರ ಅವರು ವಿದ್ಯಾರ್ಥಿ ದೆಸೆಯಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಈ ಉಪಚುನಾವಣೆಯಲ್ಲಿ ಸವಿತಾ ಸಮಾಜಕ್ಕೆ ಸೇರಿರುವ ಕಿಶೋರಕುಮಾರ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿತ್ತು.
ಕಿಶೋರಕುಮಾರ ಅವರು 3654 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದ ರಾಜು ಪೂಜಾರಿ ಅವರು 1957 ಮತ ಪಡೆದಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಪಡೆದುಕೊಂಡರು. ಒಟ್ಟು 87 ಮತ ತಿರಸ್ಕೃತಗೊಂಡಿತು. ಇಲ್ಲಿ 5906 ಮತಗಳು ಚಲಾವಣೆಗೊಂಡಿದ್ದವು. 5819 ಮತ ಸಿಂಧು ಮತಗಳಿದ್ದವು. ಮತ ಎಣಿಕೆ ಮಂಗಳೂರು ಕೋಡಿಯಾಲ್ ಬೈಲಿನ ಸೆಂಟ್ ಅಲೋಸಿಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್...! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement