ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ ಜಿಲ್ಲೆಯ ಸಂಡೂರಿಗೆ ಸಂಸದ ತುಕರಾಂ ಪತ್ನಿ ಈ ಅನ್ನಪೂರ್ಣಗೆ ಟಿಕೆಟ್ ನೀಡಲಾಗಿದೆ. ಬಸವರಾಜ ಬೊಮ್ಮಾಯಿಯಿಂದ ತೆರವಾಗಿದ್ದ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಘೋಷಣೆ ಆಗಿಲ್ಲ.
ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಮತ್ತು ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ತನ್ನ ಮಿತ್ರ ಪಕ್ಷ ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
ನಿಮ್ಮ ಕಾಮೆಂಟ್ ಬರೆಯಿರಿ