ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಇಂದು ಬುಧವಾರ (ಅಕ್ಟೋಬರ್ 24) ಕೆಲವೇ ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹಲವೆಡೆ ಜಿಟಿಜಿಟಿ ಮಳೆ ಆರಂಭವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ರಾಜ್ಯದ ಹಲವು ಜಿಲ್ಲೆಗಳಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಚದುರಿದಂತೆ ಭಾರೀ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಮಳೆ ಮಧ್ಯಾಹ್ನದ ನಂತರ ಪ್ರಾರಂಭ ಆಗುವ ಸಾಧ್ಯತೆ ಇದ್ದು ತಡರಾತ್ರಿಯವರೆಗೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement