ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಸಾವಿರಾರು ಮೆಟ್ರಿಕ್ ಟನ್ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿರುವ ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿ ಏಳು ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲ್ಲದೆ, ಒಟ್ಟಾರೆ ₹44.65 ಕೋಟಿ ದಂಡ ವಿಧಿಸಿದೆ.
ಮೊದಲ ಆರೋಪಿಯಾಗಿರುವ ಅರಣ್ಯಾಧಿಕಾರಿ ಮಹೇಶ ಜೆ.ಬಿಳಿಯೆ, ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕರೂ ಆದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಸತೀಶ ಸೈಲ್, ಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಖಾರದಪುಡಿ ಮಹೇಶ, ಸ್ವಸ್ತಿಕ್ ಕಂಪನಿ ಮಾಲೀಕರಾದ ಕೆ.ವಿ.ನಾಗರಾಜ ಮತ್ತು ಕೆ ವಿ ಗೋವಿಂದರಾಜ, ಆಶಾಪುರ ಮೈನಿಂಗ್ ಕಂಪನಿ ಮಾಲೀಕ ಚೇತನ್ ಷಾ ಮತ್ತು ಲಾಲ್ ಮಹಲ್ ಕಂಪನಿ ಮಾಲೀಕ ಪ್ರೇಮ್ ಚಂದ್ ಗರ್ಗ್‌ಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ವಿಶೇಷ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ.
ಎಲ್ಲಾ ಆರು ಪ್ರಕರಣಗಳಲ್ಲಿಯೂ ದೋಷಿಗಳಿಗೆ ಕಳ್ಳತನಕ್ಕೆ 3 ವರ್ಷ, ಒಳಸಂಚಿಗೆ 5 ವರ್ಷ ಹಾಗೂ ವಂಚನೆ ಅಪರಾಧಕ್ಕೆ 7 ವರ್ಷ ಶಿಕ್ಷೆ ವಿಧಿಸಲಾಗಿದೆ. ಎಲ್ಲಾ ಶಿಕ್ಷೆಯೂ ಏಕಕಾಲಕ್ಕೆ ಜಾರಿಯಾಗಲಿರುವುದರಿಂದ ಗರಿಷ್ಠ 7 ವರ್ಷ ಶಿಕ್ಷೆ ಆಗಲಿದೆ. 2010 ರ ಮಾರ್ಚ್ 20ರಲ್ಲಿ ಸೀಜ್ ಆಗಿದ್ದ 8ಲಕ್ಷ ಮೆಟ್ರಿಕ್ ಟನ್ ಅದಿರಿನ ಪೈಕಿ, 6 ಲಕ್ಷ ಮೆಟ್ರಿಕ್ ಟನ್ ನಾಪತ್ತೆಯಾಗಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ಆರಂಭಿಸಿತ್ತು. ನಿಯಮಗಳ ಅನ್ವಯ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಶಾಸಕ ಅಥವಾ ಸಂಸದ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಈಗ ಶಾಸಕ ಸತೀಶ್ ಸೈಲ್ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಅವರ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.
2010 ರ ಮಾರ್ಚ್ 20ರಲ್ಲಿ ಸೀಜ್ ಆಗಿದ್ದ 8ಲಕ್ಷ ಮೆಟ್ರಿಕ್ ಟನ್ ಅದಿರಿನ ಪೈಕಿ, 6 ಲಕ್ಷ ಮೆಟ್ರಿಕ್ ಟನ್ ನಾಪತ್ತೆಯಾಗಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ಆರಂಭಿಸಿತ್ತು. ಈ ಪ್ರಕರಣದಲ್ಲಿ ಸತೀಶ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. 14 ವರ್ಷಗಳ ವಿಚಾರಣೆಯ ಬಳಿಕ ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸತೀಶ್ ಸೈಲ್ ಹಾಗೂ ಇತರ 7 ಆರೋಪಿಗಳನ್ನು ದೋಷಿ ತೀರ್ಪು ನೀಡಿ ಶಿಕ್ಷೆಯನ್ನು ಪ್ರಕಟಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ