ಭಜನೆ ಸ್ಪರ್ಧೆ ವೇಳೆ ಹಾರಿ ಹೋದ ಪ್ರಾಣಪಕ್ಷಿ

ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಭಾನುವಾರ ನಡೆದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ವೇದಿಕೆಯಿಂದ ನಿರ್ಗಮಿಸುತ್ತಿದ್ದ ವೇಳೆ ಕಲಾವಿದರೊಬ್ಬರು ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬಸಾಪುರ ಗ್ರಾಮದ ಈರಪ್ಪ ಫಕ್ಕೀರಪ್ಪ ಬಬಲಿ (48) ಎಂಬವರೇ ಮೃತಪಟ್ಟ ಕಲಾವಿದರಾಗಿದ್ದಾರೆ. ಅವರು ವೇದಿಕೆಯಿಂದ ಇಳಿಯುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಅಸುನೀಗಿದರು.
ತಂಡದ ಸದಸ್ಯರೊಂದಿಗೆ ಭಾಗಿಯಾಗಿದ್ದ ಅವರು ಹಾಡು ಮುಗಿದ ನಂತರ ಕೈಯಲ್ಲಿ ಹಿಡಿದ ತಾಳದೊಂದಿಗೆ ಇಳಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಅಲ್ಲಿಯೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement